ಬೆಂಗಳೂರು:
ಮನರೇಗಾ ಮತ್ತು ವಿಬಿ ಜಿರಾಮ್ ಜಿ ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಜಟಾಪಟಿ ನಡೆಯುತ್ತಿರುವ ನಡುವೆ, ಬಿಜೆಪಿ ಬಿಡುಗಡೆ ಮಾಡಿರುವ ಜಾಹೀರಾತು ಮಹಾತ್ಮ ಗಾಂಧಿಯ ಅಹಿಂಸಾ ತತ್ವಕ್ಕೆ ಅವಮಾನವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಈ ಕುರಿತು ಕಾಂಗ್ರೆಸ್ ನಾಯಕ
ಬಿ.ಕೆ. ಹರಿಪ್ರಸಾದ್ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿ,
ಸತ್ಯ, ಅಹಿಂಸೆ ಮತ್ತು ಸಹಿಷ್ಣುತೆಯನ್ನೇ ಜೀವನ ಮೌಲ್ಯಗಳಾಗಿ ಬದುಕಿದ
ಮಹಾತ್ಮಾ ಗಾಂಧಿ ಅವರನ್ನು ಅವಮಾನಿಸುವ ಮನಸ್ಥಿತಿಯನ್ನು ಬಿಜೆಪಿ ಜಾಹೀರಾತು ಮೂಲಕ ಬಹಿರಂಗಪಡಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ನೀಡಿರುವ ಜಾಹೀರಾತಿನಲ್ಲಿ, ಗಾಂಧಿಯ ಊರುಗೋಲನ್ನು ಬಳಸಿ ಮುಖ್ಯಮಂತ್ರಿ
ಸಿದ್ದರಾಮಯ್ಯ,
ಲೋಕಸಭೆ ವಿರೋಧ ಪಕ್ಷದ ನಾಯಕ
ರಾಹುಲ್ ಗಾಂಧಿ
ಮತ್ತು ಎಐಸಿಸಿ ಅಧ್ಯಕ್ಷ
ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಹೊಡೆಯುವಂತೆ ಚಿತ್ರಿಸಿರುವುದು ಗಾಂಧಿಯ ಅಹಿಂಸಾ ತತ್ವವನ್ನೇ ಹೀಯಾಳಿಸುವ ಕೃತ್ಯವಾಗಿದೆ ಎಂದು ಹರಿಪ್ರಸಾದ್ ಟೀಕಿಸಿದ್ದಾರೆ.
ಕ್ರೌರ್ಯ, ಹಿಂಸೆ ಮತ್ತು ದೌರ್ಜನ್ಯವನ್ನು ಉತ್ತೇಜಿಸುವ ಸಂಘ ಪರಿವಾರ ಹಾಗೂ
ಭಾರತೀಯ ಜನತಾ ಪಕ್ಷ
ಗಾಂಧಿ ಅವರ ತತ್ವಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಈ ರೀತಿಯ ಜಾಹೀರಾತುಗಳು ಸಮಾಜಕ್ಕೆ ತಪ್ಪು ಸಂದೇಶ ನೀಡುತ್ತವೆ ಎಂದಿದ್ದಾರೆ.
ಇದಕ್ಕೆ ಪ್ರತಿಯಾಗಿ
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್
ಪಕ್ಷವು ಬಿಜೆಪಿ ಜಾಹೀರಾತಿನ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಗಾಂಧಿಯ ಅಹಿಂಸಾ ಹಾಗೂ ಸಹಿಷ್ಣುತೆಯ ಮೌಲ್ಯಗಳನ್ನು ಅವಮಾನಿಸುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.