ಮಾಲೂರು ಕ್ಷೇತ್ರ: ಮರು ಮತ ಎಣಿಕೆ – ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ:
ತೀವ್ರ ಕುತೂಹಲ ಕೆರಳಿಸಿದ್ದ ಕೋಲಾರ ಜಿಲ್ಲೆಯ ಮಾಲೂರು ವಿಧಾನಸಭಾ ಕ್ಷೇತ್ರದ ಮರು ಮತ ಎಣಿಕೆ ಪ್ರಕರಣದಲ್ಲಿ ಹಾಲಿ ಕಾಂಗ್ರೆಸ್ ಶಾಸಕ
ಕೆ.ವೈ. ನಂಜೇಗೌಡ ಅವರೇ ಗೆಲುವು ಸಾಧಿಸಿದ್ದಾರೆ.

ಈ ಪ್ರಕರಣದಲ್ಲಿ
Supreme Court of India ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಗೊಳಿಸಿದ್ದು, ನಂಜೇಗೌಡ ಸಲ್ಲಿಸಿದ್ದ ಮೇಲ್ಮನವಿಯನ್ನು ಎತ್ತಿ ಹಿಡಿದಿದೆ.

ಮುಖ್ಯ ನ್ಯಾಯಮೂರ್ತಿ
ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ
ಜಾಯ್ಮಲ್ಯ ಬಾಗ್ಚಿ ಅವರನ್ನು ಒಳಗೊಂಡ ನ್ಯಾಯಪೀಠ, ಮರು ಮತ ಎಣಿಕೆಯ ಫಲಿತಾಂಶದಂತೆ ನಂಜೇಗೌಡ ಅವರು ಬಿಜೆಪಿಯ ಅಭ್ಯರ್ಥಿ
ಕೆ.ಎಸ್. ಮಂಜುನಾಥ ಗೌಡ ಅವರಿಗಿಂತ 250 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ ಎಂದು ತಿಳಿಸಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ನಂಜೇಗೌಡ ಅವರು ಕೇವಲ 248 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಆ ಚುನಾವಣೆಯಲ್ಲಿ ನಂಜೇಗೌಡ 50,955 ಮತಗಳನ್ನು ಪಡೆದಿದ್ದರೆ, ಮಂಜುನಾಥ ಗೌಡ 50,707 ಮತಗಳನ್ನು ಪಡೆದಿದ್ದರು.

ಈ ಅಲ್ಪ ಮತಾಂತರದ ಹಿನ್ನೆಲೆಯಲ್ಲಿ ಮಂಜುನಾಥ ಗೌಡ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ಮತಗಳ ಮರು ಎಣಿಕೆ ನಡೆಸಿ ಫಲಿತಾಂಶವನ್ನು ಮರು ಘೋಷಿಸುವಂತೆ
Karnataka High Court ಆದೇಶಿಸಿತ್ತು.

ಆದರೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನಂಜೇಗೌಡ ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ ಸುಪ್ರೀಂಕೋರ್ಟ್, ಹೈಕೋರ್ಟ್ ತೀರ್ಪನ್ನು ವಜಾಗೊಳಿಸಿ ಮರು ಮತ ಎಣಿಕೆ ಫಲಿತಾಂಶದ ಆಧಾರದಲ್ಲೇ ನಂಜೇಗೌಡ ಅವರ ಗೆಲುವು ಮಾನ್ಯವಾಗಿದೆ ಎಂದು ಸ್ಪಷ್ಟಪಡಿಸಿದೆ.

Leave a Comment

Your email address will not be published. Required fields are marked *

Scroll to Top