ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ: ಸಿದ್ದರಾಮಯ್ಯನವರ 17ನೇ ಬಾರಿಯ ರಾಜ್ಯ ಬಜೆಟ್

ಬೆಂಗಳೂರು:
ವಿಧಾನಮಂಡಲ ಅಧಿವೇಶನ ಮುಕ್ತಾಯವಾದ ಬೆನ್ನಲ್ಲೇ, ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರು ಫೆಬ್ರವರಿ 5ರಂದು ವಿವಿಧ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆಗಳನ್ನು ಆರಂಭಿಸಿದರು.

ವಿಧಾನಮಂಡಲದ ಜಂಟಿ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದ್ದು, ಮಾರ್ಚ್ ತಿಂಗಳಲ್ಲಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಾರಿಯ ರಾಜ್ಯ ಬಜೆಟ್ ಅನ್ನು ಮಂಡಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಸರ್ಕಾರದ ಪ್ರಮುಖ ಇಲಾಖೆಗಳೊಂದಿಗೆ ಹಂತ ಹಂತವಾಗಿ ಬಜೆಟ್ ಪೂರ್ವಭಾವಿ ಸಭೆಗಳನ್ನು ನಡೆಸಲಾಗುತ್ತಿದ್ದು, ಇಂದು ಅರಣ್ಯ, ಕಾನೂನು, ಪ್ರವಾಸೋದ್ಯಮ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಕಾರ್ಮಿಕ, ಒಳಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರು ಹಾಗೂ ಹಿರಿಯ ಅಧಿಕಾರಿಗಳನ್ನು ಸಭೆಗೆ ಕರೆಯಲಾಗಿದೆ.

ಬಜೆಟ್ ರೂಪುರೇಷೆ, ಇಲಾಖಾವಾರು ಅಗತ್ಯತೆಗಳು ಹಾಗೂ ಮುಂದಿನ ವರ್ಷದ ಆದ್ಯತೆಗಳ ಬಗ್ಗೆ ಈ ಸಭೆಗಳಲ್ಲಿ ಚರ್ಚೆ ನಡೆಯಲಿದೆ.

Leave a Comment

Your email address will not be published. Required fields are marked *

Scroll to Top